ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | 10 ದಿನದೊಳಗೆ ಅಧ್ಯಯನ ವರದಿ ಸಲ್ಲಿಸುವಂತೆ ಸಿಎಂ ಸೂಚನೆ

July 1, 2025
9:33 PM
ರಾಜ್ಯದಲ್ಲಿ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ.

ಕಳೆದ ಒಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ರಾಜ್ಯದಲ್ಲಿ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ.  ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror