ಆಗಷ್ಟೇ ಹುಟ್ಟಿದ ಮಗುವಿಗೆ ಹೃದಯ ಸಮಸ್ಯೆ ಇರುವುದನ್ನು ಗಮನಿಸಿ ತಕ್ಷಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂಬ ಕಾರಣಕ್ಕೆ ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವ ಘಟನೆ ನಡೆದಿದೆ.
ಅಶ್ವಿನಿ ಎಂಬವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರದಂದು ಮಗುವಿಗೆ ಜನ್ಮ ನೀಡಿದ್ದು, ಆದರೆ ಜನಿಸಿದ ಮಗುವಿನಲ್ಲಿ ಹೃದಯ ಸಮಸ್ಯೆ ಇರುವುದನ್ನು ವೈದ್ಯರು ಗಮನಿಸಿದ್ದರು.ಕೂಡಲೇ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ತಜ್ಞ ವೈದ್ಯರನ್ನು ಸಂಪರ್ಕಿಸಿದ್ದು, ತಕ್ಷಣದ ಶಸ್ತ್ರಚಿಕಿತ್ಸೆ ಅಗತ್ಯವಿರುವ ಕಾರಣ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚಿಸಿದ್ದರು.
ಮಗುವಿನ ಪೋಷಕರಿಗೆ ವಿಷಯ ತಿಳಿಸಿದ ನಂತರ ಅವರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಜೀರೋ ಟ್ರಾಫಿಕ್ ವ್ಯವಸ್ಥೆಗೆ ಮನವಿ ಮಾಡಿದ್ದರು. ಅದರಂತೆ ಜೀರೋ ಟ್ರಾಫಿಕ್ ನಲ್ಲಿ ಮಗುವನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel