ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

March 1, 2025
7:13 AM
ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ  39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ  39.1, ಕೋಟಾದಲ್ಲಿ  39.5,  ಸೇರಿದಂತೆ  ಜಿಲ್ಲೆಯ  ವಿವಿಧ ಭಾಗಗಳಲ್ಲಿ  ತಾಪಮಾನ  ದಿನದಿಂದ  ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು  ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಎಚ್ಚರಿಸಿದ್ದಾರೆ.

ಕರಾವಳಿ ಭಾಗದಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ  ಬಿಸಿಗಾಳಿ ಬೀಸುವ ಸಾಧ್ಯತೆಯಿದ್ದು,  ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ ಎಂದು  ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ  ಮಂಗಳೂರಿನಲ್ಲಿ  ಹೇಳಿದ್ದಾರೆ.………ಮುಂದೆ ಓದಿ……..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ   40 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದ್ದು,  ಮುಂದಿನ ದಿನಗಳಲ್ಲಿ  ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ  ಬಿಸಿಗಾಳಿಯ  ವಾತಾವರಣ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಸಾರ್ವಜನಿಕರು  ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು  ಕೈಗೊಳ್ಳಬೇಕಾಗಿದೆ ಎಂದರು. ವಿಶೇಷವಾಗಿ ಮಧ್ಯಾಹ್ನ   12 ಗಂಟೆಯಿಂದ 3 ಗಂಟೆಗೆಯ ಅವಧಿಯಲ್ಲಿ  ಮನೆ ಹಾಗೂ ಕಚೇರಿಯಿಂದ ಹೊರ ಹೋಗುವುದನ್ನು ತಪ್ಪಿಸಬೇಕು. ತಂಪು ಪಾನೀಯ, ನೀರಿನ ಸೇವೆನೆಗೆ  ಹೆಚ್ಚಿನ  ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ  39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ  39.1, ಕೋಟಾದಲ್ಲಿ  39.5,  ಸೇರಿದಂತೆ  ಜಿಲ್ಲೆಯ  ವಿವಿಧ ಭಾಗಗಳಲ್ಲಿ  ತಾಪಮಾನ  ದಿನದಿಂದ  ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು  ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror