ಕರಾವಳಿ ಭಾಗದಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಬಿಸಿಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಂಗಳೂರಿನಲ್ಲಿ ಹೇಳಿದ್ದಾರೆ.………ಮುಂದೆ ಓದಿ……..
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಬಿಸಿಗಾಳಿಯ ವಾತಾವರಣ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಗೆಯ ಅವಧಿಯಲ್ಲಿ ಮನೆ ಹಾಗೂ ಕಚೇರಿಯಿಂದ ಹೊರ ಹೋಗುವುದನ್ನು ತಪ್ಪಿಸಬೇಕು. ತಂಪು ಪಾನೀಯ, ನೀರಿನ ಸೇವೆನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ 39.4, ಕೊಕ್ಕಡದಲ್ಲಿ 40.4, ಬ್ರಹ್ವಾವರದಲ್ಲಿ 39.1, ಕೋಟಾದಲ್ಲಿ 39.5, ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…