ಭಾನುವಾರದಿಂದ ಬುಧವಾರದವರೆಗೆ ದೇಶದ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಹೀಟ್ ವೇವ್ ಕಾರಣದಿಂದ ತೀವ್ರ ತಾಪಮಾನ ಮತ್ತು ಏಪ್ರಿಲ್ 7 ರಿಂದ 9 ರವರೆಗೆ ಮಧ್ಯಪ್ರದೇಶದಲ್ಲಿ ಹೀಟ್ ವೇವ್ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರದವರೆಗೆ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಹೀಟ್ ವೇವ್ ಕಾರಣದಿಂದ ತೀವ್ರ ತಾಪಮಾನ ಮತ್ತು ಏಪ್ರಿಲ್ 7 ರಿಂದ 9 ರವರೆಗೆ ಮಧ್ಯಪ್ರದೇಶದಲ್ಲಿ ಹೀಟ್ ವೇವ್ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 7 ಮತ್ತು 8 ರಂದು ದಕ್ಷಿಣ ಪಂಜಾಬ್, ಹರಿಯಾಣ ಮತ್ತು ಪಕ್ಕದ ಪಶ್ಚಿಮ ಉತ್ತರ ಪ್ರದೇಶದಲ್ಲಿಯೂ ಸಹ ಉಷ್ಣ ಅಲೆ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಗುಜರಾತ್, ಉತ್ತರ ಪಂಜಾಬ್, ಉತ್ತರ ಹರಿಯಾಣ, ಚಂಡೀಗಢ, ಜಮ್ಮು, ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಶ್ಚಿಮ ಉತ್ತರಾಖಂಡ, ಉತ್ತರ ಬಿಹಾರ, ಉಪ ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಪಶ್ಚಿಮ ಅಸ್ಸಾಂನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ವಾಯುವ್ಯ ಮತ್ತು ಭಾರತದ ಉಳಿದ ಭಾಗಗಳು, ದಕ್ಷಿಣ ಬಿಹಾರ, ಜಾರ್ಖಂಡ್, ಒಡಿಶಾ ಕರಾವಳಿ, ಆಂಧ್ರಪ್ರದೇಶದ ಉತ್ತರ ಕರಾವಳಿ, ಪಶ್ಚಿಮ ಬಂಗಾಳದ ಗಂಗಾ ನದಿ, ಅರುಣಾಚಲ ಪ್ರದೇಶ, ಉಳಿದ ಅಸ್ಸಾಂ ಮತ್ತು ಮೇಘಾಲಯದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಒಂದರಿಂದ 3 ಡಿಗ್ರಿಗಳಷ್ಟು ಹೆಚ್ಚಾಗಿದೆ.
ಈ ನಡುವೆ ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಕೇರಳ ಮತ್ತು ಮಾಹೆ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…