Advertisement
ಪ್ರಮುಖ

ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ

Share

ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ದ ಕ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ.ಮುಂದಿನ ಎರಡು ದಿನ ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.………ಮುಂದೆ ಓದಿ……..

ಬಿಸಿಗಾಳಿ/ ಹೀಟ್ ವೇವ್‍ಗೆ ಸಲಹೆಗಳು: ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ ಟೋಪಿ, ಬೂಟುಗಳು ಅಥವಾ ಚಪ್ಪಲ್‍ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ. ಹಳೆಯ ಆಹಾರ ಮತ್ತು ಹೆಚ್ಚಿನ ಪ್ರೊಟೀನ್ ಹೊಂದಿರುವ ಆಹಾರವನ್ನು ತಪ್ಪಿಸಿ. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ. ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಎಳನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ.ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್ ಗಳು ಅಥವಾ ಸನ್‍ಶೇಡ್‍ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ. ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುವಾಗ ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಸಾಧ್ಯವಾದಷ್ಟು ವಾಹನಗಳಿಗೆ ಪುಲ್ ಟ್ಯಾಂಕ್ ಇಂಧನವನ್ನು ಹಾಕಿಸಬೇಡಿ ಹಾಗೂ ನೆರಳಿನಲ್ಲಿ ನಿಲ್ಲಿಸಬೇಕು.

ಸನ್‍ಸ್ಟೋಕ್ ಪೀಡಿತ ವ್ಯಕ್ತಿಯ ಚಿಕಿತ್ಸೆಗಾಗಿ ಸಲಹೆಗಳು: ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ, ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು. ವ್ಯಕ್ತಿಗೆ  ನಿಂಬೆ ಶರಬತ್ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಬಹುದು. ವ್ಯಕ್ತಿಯನ್ನು ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ಕೊಡಿಸಬೇಕಾಗುತ್ತದೆ. ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ಕರಾವಳಿ ಕರ್ನಾಟಕದ ಬಿಸಿ ಗಾಳಿ ಮತ್ತು ಆರ್ದ ಪರಿಸ್ಥಿತಿಗಳಿಗೆ ಸಲಹೆ: ಸಾಧಾರಣ ತಾಪಮಾನ ಮತ್ತು ಶಾಖವು ಸಾಮಾನ್ಯ ಜನರಿಗೆ ಸಹಿಸಿಕೊಳ್ಳಬಲ್ಲದು ಆದರೆ ದುರ್ಬಲ ಜನರಿಗೆ ಮಧ್ಯಮ ಆರೋಗ್ಯ ಕಾಳಜಿ ಉದಾ:- ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವ ಜನರಿಗೆ ಹೆಚ್ಚು ಅಪಾಯವಿದ್ದು ಸೂಕ್ತ ಕಾಳಜಿ ವಹಿಸಬೇಕು. ಬಿಸಿಲಿನಲ್ಲಿ ತಲೆ ಹಾಗೂ ದೇಹವನ್ನು ಸೂರ್ಯನ ಕಿರಣಗಳಿಗೆ ಒಡ್ಡದಿರಿ. ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಿ, ಟೋಪಿ ಅಥವಾ ಕೊಡೆ/ಛತ್ರಿ ಬಳಸಬೇಕು. ಒಂದು ವೇಳೆ ಹೊರಗೆ ಬಿಸಿಲಿನಿಂದ ಮನೆಗೆ ಬಂದ ತಕ್ಷಣ ಕೂಡಲೇ ಅತೀ ತಂಪಾದ ನೀರು ಕುಡಿಯಬಾರದು ಅಥವಾ ಎ.ಸಿ /ಕೂಲರ್‍ಗಳನ್ನು ಕೂಡಲೇ ಬಳಸಬಾರದು.

ಬಿಸಿಗಾಳಿ ಸಂದರ್ಭಗಳಲ್ಲಿ ಸಮುದಾಯ ಮಟ್ಟದಲ್ಲಿ ಅನುಸರಿಸಬೇಕಾದ ಕ್ರಮಗಳು:  ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿರಿ, ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಿ. ಸಾಧ್ಯವಾದಷ್ಟು ಹತ್ತಿಯ ಉಡುಪುಗಳನ್ನು ಧರಿಸಿ, ಹತ್ತಿಯ ಟೋಪಿಗಳನ್ನು ಬಳಸಿ, ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ, ಸಾಕಷ್ಟು ನೀರು, ಮಜ್ಜಿಗೆ ಕುಡಿಯಿರಿ, ವಾಸವಿರುವ ಕೋಣೆಯನ್ನು ತಂಪಾಗಿರಿಸಿ,ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಿ, ಬಿಸಿಗಾಳಿಗೆ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ಕೊಡಿಸಿ, ಬಿಸಿಗಾಳಿಗೆ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ, ದ್ರವ ರೂಪದ ಆಹಾರ ನೀಡಬೇಕು.

ಅನುಸರಿಸಬಾರದ ಕ್ರಮಗಳು: ನೇರ ಬಿಸಿಲು/ ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ. ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ, ಕಪ್ಪು /ಘಾಡ ಬಣ್ಣದ, ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ. ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ. ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ. ಬಿಸಿ ಚಹ, ಕರಿದ ಪದಾರ್ಥ ಮದ್ಯ ಸೇವಿಸಬೇಡಿ. ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಿ. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬೇಡಿ. ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬೇಡಿ. ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೇನು ಸೇವಿಸಬಾರದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

15 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago