ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

March 4, 2025
2:33 PM

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ  ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವಂತೆ, ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯುವಂತೆ ಹಾಗೂ ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಕಂಡುಬಂದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ (1077) (08382229857) ಸಂಪರ್ಕಿಸುವಂತೆ  ಜಿಲ್ಲಾಧಿಕಾರಿಗಳು ಹಾಗೂ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಕೆ.ಲಕ್ಷ್ಮಿಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ʼಕೊಕೊ ಕ್ರೀಂ’ ಗೆ ಬೇಡಿಕೆ…! ಇದು ರೈತನ ಇನೋವೇಶನ್ – ಇಲ್ಲಿ ಡೈರಿ ಇಲ್ಲ… ಕೆಮಿಕಲ್ ಇಲ್ಲ…ತೆಂಗಿನ ಹಾಲು ಮಾತ್ರಾ..!
March 21, 2026
7:41 AM
by: ಮಹೇಶ್ ಪುಚ್ಚಪ್ಪಾಡಿ
₹5 ಕೂಲಿಯಿಂದ ₹15 ಕೋಟಿ ಕೃಷಿ ಉದ್ಯಮದವರೆಗೆ…! ಈಗ ಆಕ್ಸ್‌ಫರ್ಡ್‌ AI ಸಮ್ಮೇಳನದಲ್ಲಿ ಭಾರತೀಯ ರೈತನ ಭಾಷಣ..!
March 20, 2026
8:42 PM
by: ದ ರೂರಲ್ ಮಿರರ್.ಕಾಂ
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ ಹವಾಮಾನ ತಿರುವು | 25 ರಾಜ್ಯಗಳಿಗೆ ಮಳೆ-ಗುಡುಗು ಎಚ್ಚರಿಕೆ, ಗಾಳಿಯೂ ಸಾಧ್ಯತೆ..!
March 20, 2026
7:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror