ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಇದೀಗ ಕೆಲವು ಕಡೆ ಮಳೆ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಇಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು ತಿಳಿಸಿದೆ. ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಹಾಗೂ ಮಂಗಳವಾರ ಕೂಡಾ ಹೀಟ್ ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚಾಗುತ್ತಿದೆ.ರಾಜ್ಯದ ಹಲವೆಡೆ ಒಣಹವೆ ಮುಂದುವರಿಯಲಿದೆ. ಈ ನಡುವೆ ಕೇರಳದ ಕ್ಯಾಲಿಕಟ್‌ನಲ್ಲಿ ಮಳೆಯಾಗಿದೆ. ತಮಿಳುನಾಡಿನ ಕೆಲವು ಕಡೆ ಮಳೆಯ ನಿರೀಕ್ಷೆ ಇತ್ತು. ಆದರೆ ಈಗ ಪರಿಸ್ಥಿತಿ ಅಲ್ಲಿ ಬದಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel