ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವಂತೆ, ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯುವಂತೆ ಹಾಗೂ ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಕಂಡುಬಂದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ (1077) (08382229857) ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಕೆ.ಲಕ್ಷ್ಮಿಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…
ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…