ಬುಧವಾರ ಸಂಜೆಯಾಗುತ್ತಿದ್ದಂತೆಯೇ ಸುಳ್ಯದ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆ ಆರಂಭವಾಗಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ, ಗುತ್ತಿಗಾರು, ಬಳ್ಪ, ಕಲ್ಲಾಜೆ, ಕೊಲ್ಲಮೊಗ್ರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗಿನಿಂದ ಕೂಡಿದ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಸುಳ್ಯದ ಗ್ರಾಮೀಣ ಭಾಗಗಳಲ್ಲಿ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಸಂಜೆ ಭಾರೀ ಮಳೆಯಾಗುತ್ತಿದೆ. ಮೆಟ್ಟಿನಡ್ಕದಲ್ಲಿ ಈಗಾಗಲೇ 160 ಮಿಮೀ ಮಳೆಯಾಗಿದೆ. ಕಮಿಲದಲ್ಲಿ ಎರಡು ಗಂಟೆಯಲ್ಲಿ85 ಮಿಮೀ ಮಳೆಯಾಗಿದೆ. ಕೇನ್ಯದಲ್ಲಿ 80 ಮಿಮೀ ಮಳೆಯಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…