ಭಾರೀ ಮಳೆಗೆ ಕುಸಿದ ಮನೆ | ಸಂಕಷ್ಟದಲ್ಲಿದೆ ಈ ಬಡ ಕುಟುಂಬ |

July 11, 2022
7:00 AM

ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದೆ. ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಸಂತ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದೆ. ಇದೀಗ ಮನೆಯ ಹಿಂಬದಿಯ ಗೋಡೆ ಮತ್ತು ತಾರಸಿ ಭಾಗ ಕುಸಿದಿದೆ. ಪ್ರಸ್ತುತ ಎದುರಾಗಿರುವ ವಿಪತ್ತಿನಿಂದಾಗಿ ವಸಂತ ಅವರು ಕಂಗಾಲಾಗಿದ್ದಾರೆ.

ಪುತ್ತೂರು ನಗರಸಭೆಯವರು ಕುಸಿದು ಬಿದ್ದಿರುವ ಮನೆಯ ಮೇಲ್ಚಾವಣಿಗೆ ಹೊದಿಸಲು ಪ್ಲಾಸ್ಟಿಕ್ ಟರ್ಪಾಲ್ ನೀಡಿದ್ದು, ಅದನ್ನು ಮನೆಗೆ ಹೊದಿಸಿ ಈ ಕುಟುಂಬ ಅಪಾಯದ ಸ್ಥಿತಿಯಲ್ಲಿ ವಾಸ್ತವ್ಯವಿದೆ. ಮನೆಗೆ ಇನ್ನಷ್ಟು ಹಾನಿ ಸಂಭವಿಸುವ ಸಾಧ್ಯತೆ ಇರುವುದರಿಂದ ನೋಟೀಸು ತಲುಪಿದ 2 ದಿನದೊಳಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮಂದಿನ ದಿನಗಳಲ್ಲಿ ಅನಾಹುತ ಸಂಭವಿಸಿದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಉಪ್ಪಿನಂಗಡಿ ಹೋಬಳಿಯ ಕಂದಾಯ ನಿರೀಕ್ಷಕರು ವಸಂತ ಅವರಿಗೆ ನೀಡಿರುವ ಸೂಚನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಸ್ಥಿತಿಗೆ ತಲುಪಿದೆ. ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಅವರ ಔಷಧಿಗೂ ಖರ್ಚು ಮಾಡಬೇಕಾಗಿದೆ. ತಾನು ಕೂಲಿ ಕೆಲಸ ಮಾಡಿಕೊಂಡು ಕಷ್ಟದ ಸ್ಥಿತಿಯಲ್ಲಿ ಬದುಕುತ್ತಿದ್ದು, ಕುಸಿದಿರುವ ಮನೆಯವನ್ನು ಅದೇ ರೀತಿಯಲ್ಲಿ ಸರಿಪಡಿಸಿಕೊಟ್ಟರೆ ಸಾಕು ಎಂದು ವಸಂತ ಹೆಗ್ಡೆ ಅವರು ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror