ದ ಕ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡವು ಗುರುವಾರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಹಾನಿಗೀಡಾದ ಕಡಲ ತೀರ, ರಸ್ತೆ, ಸೇತುವೆ, ಮನೆಗಳನ್ನು ಪರಿಶೀಲಿಸಿತು.
Advertisement
Advertisement
ನಂತರ ತಂಡವು ವಿಪರೀತ ಕಡಲ್ಕೊರೆತ ಉಂಟಾಗಿರುವ ಉಳ್ಳಾಲದ ಬಟಪ್ಪಾಡಿಗೆ ತೆರಳಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿತು. ರಸ್ತೆ ಹಾನಿ, ಕಡಲ್ಕೊರೆತದಿಂದಾದ ಹಾನಿ ವೀಕ್ಷಿಸಿದ ತಂಡದ ಸದಸ್ಯರು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ನಂತರ ಹೊಸಬೆಟ್ಟು-ಮೀನಕಳಿಗೆ ತೆರಳಿದ ಅವರು ಕಡಲ್ಕೊರೆತ, ರಸ್ತೆ ಹಾನಿ, ತೀವ್ರ ಮಳೆಯಿಂದಾಗಿ ಮನೆಗಳಿಗಾದ ಹಾನಿ ಸೇರಿದಂತೆ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಉಂಟಾದ ಕಡಲ್ಕೊರೆತದ ಹಾಗೂ ಇತರೆ ಹಾನಿಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ತಂಡವು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement