ಮುಂಗಾರು ಚುರುಕಾಗಿದೆ. ಕೇರಳ, ಕರ್ನಾಟಕ ಕರಾವಳಿ, ಗೋವಾ, ಮಹಾರಾಷ್ಟ್ರ ಸೇರಿದಂತೆ ಹಿಮಾಚಲ ಪ್ರದೇಶದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. 6 ಜಿಲ್ಲೆಗಳಲ್ಲಿ ಗುರುವಾರವೂ ಆರೆಂಜ್ ಎಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು ರೆಡ್ ಎಲರ್ಟ್ ಘೋಷಿಸಲಾಗಿದೆ.ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ ಮುಂಗಾರು ಮಳೆಯಾಗುತ್ತಿದೆ. ದಕ್ಷಿಣ ಮತ್ತು ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಧ್ಯ ಮತ್ತು ಪೂರ್ವ ಭಾರತದಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಮಹಾರಾಷ್ಟ್ರದ ರಾಯಗಢ ಜಿಲ್ಲೆಗೆ ಇಂದು ರೆಡ್ ಎಲರ್ಟ್ ಘೋಷಿಸಲಾಗಿದ್ದು, ಅಧಿಕ ಮಳೆಯಾಗುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ. ಗೋವಾದಲ್ಲಿ, ಇಂದು ಭಾರೀ ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ ಮತ್ತು ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿದೆ. ಮುಂಬೈ ನಗರಕ್ಕೆ ಆರೆಂಜ್ ಹಾಗೂ ಎಲ್ಲೋ ಎಲರ್ಟ್ ನೀಡಲಾಗಿದೆ. ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ ಇದೆ.
ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬುಧವಾರ ಬೆಳಗ್ಗೆ ಹಠಾತ್ ಪ್ರವಾಹ ಸಂಭವಿಸಿದ್ದು, ಹರೋಲಿ ಪ್ರದೇಶದ ಹಳ್ಳಿಯೊಂದರಲ್ಲಿ ಸುಮಾರು 10 ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.
ಕೇರಳದಲ್ಲಿ ಸತತ 4 ದಿನಗಳಿಂದ ಮಳೆಯಾಗುತ್ತಿದೆ. ಭಾರೀ ಮಳೆಗೆ ಅಪಾರ ಹಾನಿಯೂ ಸಂಭವಿಸಿದೆ. ಒಬ್ಬ ವ್ಯಕ್ತಿ ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಕೇರಳ ರಾಜ್ಯಾದ್ಯಂತ 264 ಕುಟುಂಬಗಳ 904 ಜನರನ್ನು 50 ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದ 18 ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 405 ಮನೆಗಳು ಭಾಗಶಃ ಹಾನಿಗೀಡಾಗಿವೆ. ಕಣ್ಣೂರು ನಗರದ 50 ವರ್ಷದ ಟಿ ಬಶೀರ್ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಿಜೀಶ್ ಪುಲಿಯುಲ್ಲಪರಂಬತ್ತು ಕೋಝಿಕ್ಕೋಡ್‌ನ ಒರ್ಕತ್ತೇರಿಯಲ್ಲಿ ಸೇತುವೆಯಿಂದ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ, ಮಲಪ್ಪುರಂನ ನಿಲಂಬೂರ್‌ನಲ್ಲಿ ಒಂದು ಕುಟುಂಬದ ಐವರು ಸದಸ್ಯರು – ಒಬ್ಬ ಮಹಿಳೆ, ಅವಳ ಇಬ್ಬರು ಹೆಣ್ಣುಮಕ್ಕಳು, ಮಗ ಮತ್ತು ಅವಳ ತಾಯಿ – ಕೊಚ್ಚಿಹೋಗಿದ್ದಾರೆ. ಅವರಲ್ಲಿ ಮೂವರು ಬದುಕುಳಿದಿದ್ದು, ಇನ್ನಿಬ್ಬರು – ಸುಶೀಲ, 60 ಮತ್ತು ಅವರ ಮೊಮ್ಮಗಳು ಅನುಶ್ರೀ, 12 – ಇನ್ನೂ ಪತ್ತೆಯಾಗಿಲ್ಲ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490