ಮಳೆಗಾಲದ ಆರಂಭವಾಗಿದೆ. ಮುಂಗಾರು ಮಳೆ ಚುರುಕಾಗುತ್ತಿದೆ. ಭಾನುವಾರ ಇಡೀ ದಿನ ತುಂತುರು ಮಳೆಯಾಗುತ್ತಲೇ ಇತ್ತು. ಈ ನಡುವೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನೀಗ ಇಲಾಖೆಗಳು ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಮೇಲೆ ಬೃಹತ್ ಗಾತ್ರದ ಮರವೊಂದು ಅನಿಲ ಎಂಬಲ್ಲಿ ಮುರಿದು ಬಿದ್ದಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಮೂಲಕ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಸುಬ್ರಹ್ಮಣ್ಯ – ಧರ್ಮಸ್ಥಳ ರಸ್ತೆಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್ ಮೇಲೆ ಮರದ ಮುರಿದು ಬಿದ್ದು ವಾಹನ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಅಪಾಯದಿಂದ ಪಾರಾಗಿದ್ದಾರೆ.
ಮಳೆಗಾಲದ ಆರಂಭದಲ್ಲಿ ಕಾಡಿನ ನಡುವೆ ಸಂಚರಿಸುವ ವಾಹನಗಳು ಎಚ್ಚರಿಕೆಯಿಂದ ಸಂಚರಿಸಬೇಕಾದ ಸಂದರ್ಭ ಈಗಿದೆ. ಅಪಾಯಕಾರಿ ಮರಗಳನ್ನು ಇಲಾಖೆಗಳು ತೆರವು ಮಾಡುವ ಕೆಲಸ ನಡೆಯಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…