Advertisement
ಸುದ್ದಿಗಳು

ಮಳೆಗಾಲದ ಆರಂಭ | ಚಲಿಸುತ್ತಿದ್ದ ಎರಡು ವಾಹನಗಳ ಮೇಲೆ ಬಿತ್ತು ಮರ | ತಪ್ಪಿದ ಅಪಾಯ | ಬೇಕಿನ್ನು ಎಚ್ಚರಿಕೆ |

Share

ಮಳೆಗಾಲದ ಆರಂಭವಾಗಿದೆ. ಮುಂಗಾರು ಮಳೆ ಚುರುಕಾಗುತ್ತಿದೆ. ಭಾನುವಾರ ಇಡೀ ದಿನ ತುಂತುರು ಮಳೆಯಾಗುತ್ತಲೇ ಇತ್ತು. ಈ ನಡುವೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ  ಚಲಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನೀಗ ಇಲಾಖೆಗಳು ಎಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕೆ ಎಸ್‌ ಆರ್‌ ಟಿ ಸಿ ಬಸ್ಸು ಮೇಲೆ ಬೃಹತ್‌ ಗಾತ್ರದ ಮರವೊಂದು ಅನಿಲ ಎಂಬಲ್ಲಿ ಮುರಿದು ಬಿದ್ದಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಮೂಲಕ ಬೆಂಗಳೂರಿಗೆ ಬಸ್ಸು ತೆರಳುತ್ತಿತ್ತು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ  ಸುಬ್ರಹ್ಮಣ್ಯ – ಧರ್ಮಸ್ಥಳ ರಸ್ತೆಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲರ್‌ ಮೇಲೆ ಮರದ ಮುರಿದು ಬಿದ್ದು ವಾಹನ ಜಖಂಗೊಂಡಿದೆ. ಪ್ರಯಾಣಿಕರು ಸಣ್ಣಪುಟ್ಟ ಅಪಾಯದಿಂದ ಪಾರಾಗಿದ್ದಾರೆ.

ಮಳೆಗಾಲದ ಆರಂಭದಲ್ಲಿ ಕಾಡಿನ ನಡುವೆ ಸಂಚರಿಸುವ ವಾಹನಗಳು ಎಚ್ಚರಿಕೆಯಿಂದ ಸಂಚರಿಸಬೇಕಾದ ಸಂದರ್ಭ ಈಗಿದೆ. ಅಪಾಯಕಾರಿ ಮರಗಳನ್ನು ಇಲಾಖೆಗಳು ತೆರವು ಮಾಡುವ ಕೆಲಸ ನಡೆಯಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

19 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

24 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

1 day ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

1 day ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

1 day ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago