ಮತ್ತೆ ಮಳೆ ಭೀತಿ | ಮಲೆನಾಡು- ಕರಾವಳಿ ಭಾಗದ ಕಡೆಗೆ ಮೋಡ ಚಲನೆ | ಕರಾವಳಿ ಜಿಲ್ಲೆಗೆ ಎಲ್ಲೋ ಎಲರ್ಟ್‌ | ಒಂದು ವಾರ ಉತ್ತಮ ಮಳೆ ನಿರೀಕ್ಷೆ |

August 24, 2022
7:01 AM

ರಾಜ್ಯದಲ್ಲಿ ಮತ್ತೆ ಮಳೆ ಭೀತಿ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ವಾರಗಳ ಕಾಲ ಉತ್ತಮ ಮಳೆ ಮುನ್ಸೂಚನೆ ಇದೆ. ಮೋಡಗಳ ಚಲನೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿದ್ದು ಉತ್ತಮ ಮಳೆ ನಿರೀಕ್ಷಿಸಲಾಗಿದ್ದು ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಬಹುದು. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕೇರಳದಲ್ಲೂ ಉತ್ತಮ ಮಳೆಯಾಗಿದ್ದು ಉತ್ತರ ಕೇರಳದ ಹಲವು ಕಡೆಗಳಲ್ಲಿ 150 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ರೈತರು ಬೆಳೆದ ಸಾಗುವಾನಿ, ಹುಣಸೆ ಮರಗಳನ್ನು ಕಟಾವು ಮಾಡಲು ಅನುಮತಿ | 2 ವರ್ಷದಲ್ಲಿ 189241 ಮರ ಕಡಿಯಲು ಅನುಮತಿ |
March 10, 2025
11:01 PM
by: ದ ರೂರಲ್ ಮಿರರ್.ಕಾಂ
ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |
March 10, 2025
10:32 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಮುಂದುವರಿದ ಒಣಹವೆ | ಕರಾವಳಿಯಲ್ಲಿ ಬಿಸಿ ತಾಪಮಾನ ಸಾಧ್ಯತೆ | ಸಿಂಧನೂರಿನಲ್ಲಿ 41.4 ಡಿಗ್ರಿ ಉಷ್ಣಾಂಶ ದಾಖಲು
March 10, 2025
10:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |
March 10, 2025
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...