ರಾಜ್ಯದಲ್ಲಿ ಮತ್ತೆ ಮಳೆ ಭೀತಿ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ ಮಾಡಲಾಗಿದೆ. ವಾರಗಳ ಕಾಲ ಉತ್ತಮ ಮಳೆ ಮುನ್ಸೂಚನೆ ಇದೆ. ಮೋಡಗಳ ಚಲನೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿದ್ದು ಉತ್ತಮ ಮಳೆ ನಿರೀಕ್ಷಿಸಲಾಗಿದ್ದು ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಬಹುದು. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳದಲ್ಲೂ ಉತ್ತಮ ಮಳೆಯಾಗಿದ್ದು ಉತ್ತರ ಕೇರಳದ ಹಲವು ಕಡೆಗಳಲ್ಲಿ 150 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…