ಸುಳ್ಯ ತಾಲೂಕು, ಕಡಬ ತಾಲೂಕುಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇದೇ ವೇಳೆ ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿತ್ತು.
ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಮಳೆ ಕಾರಣ ಪರೀಕ್ಷೆ ಮುಂದೂಡಿಕೆ ಆಗಿರಲಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಬಂದಿದ್ದಾರೆ. ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಿತ್ತಿವೆ. ಕೊಡಗು ಜಿಲ್ಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿತ್ತು. ಇಲ್ಲಿ ಮುಂದೂಡಿಕೆ ಆಗಿರಲಿಲ್ಲ.
ಭಾರೀ ಮಳೆ ನಡುವೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಕುಮಾರಧಾರಾ ನದಿ ದಾಟಿದರು.
Students crossed the Kumaradhara river to write the exam at Kukke Subrahmanya.#kukkesubrahmanya #HeavyRains
#Rainfall
#ಮಳೆ@DCDK9 @CMofKarnataka @osd_cmkarnataka pic.twitter.com/rPVtOiLm9TAdvertisement— theruralmirror (@ruralmirror) July 24, 2023
ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುತ್ತದೆ. ಆದರೆ ಗ್ರಾಮೀಣ ಭಾಗದ ಪರಿಸ್ಥಿತಿ ಭಾರೀ ಮಳೆಯಾದರೆ ಯಾವತ್ತೂ ಸಂಕಷ್ಟದಲ್ಲಿರುತ್ತದೆ. ಮಳೆಗಾಲ ಸರಿಯಾದ ಸಂಪರ್ಕ ವ್ಯವಸ್ಥೆ ಇರುವುದಿಲ್ಲ, ನದಿ, ಹೊಳೆ ದಾಟಿ ಬರಬೇಕಾದ ಸ್ಥಿತಿ ಇರುತ್ತದೆ. ಆದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗಿ ಕುಮಾರಧಾರಾ ನದಿ ಉಕ್ಕಿ ಹರಿಯುವ ವೇಳೆ ಅಪಾಯ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದ್ದು ಈಗ ಚರ್ಚೆಗೆ ಕಾರಣವಾಗಿದೆ.