ದೆಹಲಿಯಲ್ಲಿ ವಿಪರೀತ ಚಳಿ | ಜ.15 ವರೆಗೆ ದೆಹಲಿ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ |

January 8, 2023
10:04 PM

ನವದೆಹಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜ.15 ವರೆಗೆ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ  ಶಿಕ್ಷಣ ನಿರ್ದೇಶನಾಲಯ ಭಾನುವಾರ ಆದೇಶ ಹೊರಡಿಸಿದೆ.

ನವದೆಹಲಿ ಕೆಲವು ವಾರಗಳಿಂದ ನಿರಂತರವಾಗಿ ತೀವ್ರ ಚಳಿ ಬಾಧಿಸುತ್ತಿದೆ.  ಭಾನುವಾರ ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಇಳಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರವರೆಗೆ ದೆಹಲಿಯ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೆಹಲಿ ಸರ್ಕಾರದ ಸೂಚನೆಯ ಮೇರೆಗೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.

ಭಾನುವಾರ ಬೆಳಗ್ಗೆ ದೆಹಲಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇತರೆಡೆಗೆ ಪ್ರಯಾಣಿ ಕೈಗೊಳ್ಳಬೇಕಿದ್ದ ಸುಮಾರು 20 ವಿಮಾನಗಳ ಹಾರಾಟದಲ್ಲಿ ಸ್ಥಗಿತಗೊಂಡಿತ್ತು.ಮಂಜಿನ ವಾತಾವರಣದಿಂದಾಗಿ 42 ರೈಲುಗಳು ಸಂಚಾರವು ಸಮಯಕ್ಕೆ ಸರಿಯಾಗಿ ನಡೆದಿಲ್ಲ ಎಂದು ರೈಲ್ವೇ ಇಲಾಖೆ ಕೂಡಾ ಹೇಳಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror