ನವದೆಹಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜ.15 ವರೆಗೆ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ನಿರ್ದೇಶನಾಲಯ ಭಾನುವಾರ ಆದೇಶ ಹೊರಡಿಸಿದೆ.
ನವದೆಹಲಿ ಕೆಲವು ವಾರಗಳಿಂದ ನಿರಂತರವಾಗಿ ತೀವ್ರ ಚಳಿ ಬಾಧಿಸುತ್ತಿದೆ. ಭಾನುವಾರ ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರವರೆಗೆ ದೆಹಲಿಯ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೆಹಲಿ ಸರ್ಕಾರದ ಸೂಚನೆಯ ಮೇರೆಗೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ. ಭಾನುವಾರ ಬೆಳಗ್ಗೆ ದೆಹಲಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇತರೆಡೆಗೆ ಪ್ರಯಾಣಿ ಕೈಗೊಳ್ಳಬೇಕಿದ್ದ ಸುಮಾರು 20 ವಿಮಾನಗಳ ಹಾರಾಟದಲ್ಲಿ ಸ್ಥಗಿತಗೊಂಡಿತ್ತು.ಮಂಜಿನ ವಾತಾವರಣದಿಂದಾಗಿ 42 ರೈಲುಗಳು ಸಂಚಾರವು ಸಮಯಕ್ಕೆ ಸರಿಯಾಗಿ ನಡೆದಿಲ್ಲ ಎಂದು ರೈಲ್ವೇ ಇಲಾಖೆ ಕೂಡಾ ಹೇಳಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…