Advertisement
MIRROR FOCUS

ಬೀದರ್ ಜಿಲ್ಲೆಯಲ್ಲಿ ಮಳೆಯಿಂದ ಭಾರೀ ಬೆಳೆ ಹಾನಿ | ಸ್ಥಳಕ್ಕೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ, ಪರಿಶೀಲನೆ

Share

ಮಳೆಯಿಂದ ಹಾನಿಗೊಳಗಾದ ಬೀದರ್ ಜಿಲ್ಲೆಯ ಹಲವು ಗ್ರಾಮಗಳಿಗೆ  ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ  ಭೇಟಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳೀಯ ನಾಗರಿಕರಿಂದ ಸಮಸ್ಯೆ ಆಲಿಸಿದರು. ಕಳೆದ ಹಲವು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ  ಜಿಲ್ಲೆಯ ಕಮಲಾನಗರ, ಔರಾದ್ ತಾಲೂಕಿನ ಅಕನಾಪೂರ, ಬಾವಲಗಾಂವ, ಹಂಗರಗಾ, ಸಾವರಗಾಂವ, ಬೋಂತಿಗಾಮಾನಾಯಕ ತಾಂಡದಲ್ಲಿ ಬೆಳೆ ಹಾನಿ ಸಂಭವಿಸಿದ್ದು,ಸೇತುವೆ, ಕೆರೆ ಕಟ್ಟೆಗಳು ಕೊಚ್ಚಿ ಹೋಗಿವೆ.

ರೈತರು ಮತ್ತು ಸಂತ್ರಸ್ತ ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಪುನರ್ವಸತಿ, ಪುನರ್ ನಿರ್ಮಾಣ ಕಾರ್ಯ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಔರಾದ್ ತಾಲೂಕಿನಲ್ಲಿ ದಾಖಲೆಯ 300 ಮಿಲಿ ಮೀಟರ್ ಮಳೆಯಾಗಿರುವುದರಿಂದ ಅಕನಾಪೂರ ಗ್ರಾಮದ ಕೆರೆ ಒಡೆದು ಬಹಳಷ್ಟು ಹಾನಿಯಾಗಿದೆ. ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸಮೀಕ್ಷೆಯ ಬಳಿಕ ಸರ್ಕಾರದಿಂದ ಪರಿಹಾರ ನೀಡಲಾಗುವುದು. ಹೆಚ್ಚಿನ ಪರಿಹಾರಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್‍ ಖಾತೆ ಸಚಿವ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

3 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

8 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago