ಭರ್ಜರಿಯಾಗಿ ಬರುತ್ತಿರುವ ಮುಂಗಾರು ಪೂರ್ವ ಮಳೆ | ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | ಜೂನ್ 6 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ

May 27, 2024
8:37 PM

ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ(Pre Mansoon rain) ಭರ್ಜರಿಯಾಗಿ ಸುರಿಯುತ್ತಿದೆ. ಕೆಲ ಜಿಲ್ಲಗಳ ನೀರಿನ ಬವಣೆ ತೀರಿದೆ. ಅರಬ್ಬೀ ಸಮುದ್ರದಲ್ಲಿ(Arabian sea) ಮುಂಗಾರು ಮಾರುತಗಳು ಬೀಸುತ್ತಿರುವ ಪರಿಣಾಮ ಮುಂದಿನ ಐದು ದಿನಗಳ ಕಾಲ ಪೂರ್ವ ಮುಂಗಾರು ಮಳೆ ದಕ್ಷಿಣ ಕನ್ನಡ(Dakshina Kannada), ಉಡುಪಿ(Udupi), ಉತ್ತರ ಕನ್ನಡ(Uttara Kannada) ಜಿಲ್ಲೆಗಳಲ್ಲಿ ಸುರಿಯಲಿದೆ. ಇನ್ನು ಜೂನ್ 6 ಅಥವಾ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ(IMD) ಮಾಹಿತಿ ನೀಡಿದೆ.

Advertisement
Advertisement
Advertisement
Advertisement

ಜೊತೆಗೆ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 22 ಡಿಗ್ರಿ ಇರಬಹುದು ಎಂದು ಅಂದಾಜಿಸಿದೆ.

“ಸದ್ಯ ಮುಂಗಾರು ಮಾರುತಗಳು ಅರಬ್ಬೀ ಸಮುದ್ರದ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಬಳಿ ಬೀಸುತ್ತಿವೆ. ಸದ್ಯ ರಾಜ್ಯದಲ್ಲಿ ಈ ಕಾರಣಕ್ಕೆ ಪೂರ್ವ ಮುಂಗಾರು ಮಳೆ ಮುಂದುವರೆದಿದೆ. ಕೇರಳಕ್ಕೆ ಈ ಮಾರುತಗಳು ಮೇ 28 ರಂದು ಪ್ರವೇಶಿಸುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿಗೆ ಜೂನ್ 6 ಅಥವಾ 7 ರಂದು ಅಪ್ಪಳಿಸಲಿವೆ. ಈಗ ಉಂಟಾಗಿರುವ ಪಶ್ಚಿಮ ಬಂಗಾಳ ಬಳಿಯ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸುವುದಿಲ್ಲ” ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜುವೇಲ್ ಮಾಣಿಕ್ಕಂ ಹೇಳಿದ್ದಾರೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಈಗಾಗಲೇ ಪುರ್ವ ಮುಂಗಾರು ಮಳೆ ಆರಂಭವಾಗಿದೆ. ಇನ್ನು ನಿಗದಿಯಂತೆ ಜೂನ್ 6 ಅಥವಾ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror