ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ(Pre Mansoon rain) ಭರ್ಜರಿಯಾಗಿ ಸುರಿಯುತ್ತಿದೆ. ಕೆಲ ಜಿಲ್ಲಗಳ ನೀರಿನ ಬವಣೆ ತೀರಿದೆ. ಅರಬ್ಬೀ ಸಮುದ್ರದಲ್ಲಿ(Arabian sea) ಮುಂಗಾರು ಮಾರುತಗಳು ಬೀಸುತ್ತಿರುವ ಪರಿಣಾಮ ಮುಂದಿನ ಐದು ದಿನಗಳ ಕಾಲ ಪೂರ್ವ ಮುಂಗಾರು ಮಳೆ ದಕ್ಷಿಣ ಕನ್ನಡ(Dakshina Kannada), ಉಡುಪಿ(Udupi), ಉತ್ತರ ಕನ್ನಡ(Uttara Kannada) ಜಿಲ್ಲೆಗಳಲ್ಲಿ ಸುರಿಯಲಿದೆ. ಇನ್ನು ಜೂನ್ 6 ಅಥವಾ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ(IMD) ಮಾಹಿತಿ ನೀಡಿದೆ.
ಜೊತೆಗೆ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 22 ಡಿಗ್ರಿ ಇರಬಹುದು ಎಂದು ಅಂದಾಜಿಸಿದೆ.
“ಸದ್ಯ ಮುಂಗಾರು ಮಾರುತಗಳು ಅರಬ್ಬೀ ಸಮುದ್ರದ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಬಳಿ ಬೀಸುತ್ತಿವೆ. ಸದ್ಯ ರಾಜ್ಯದಲ್ಲಿ ಈ ಕಾರಣಕ್ಕೆ ಪೂರ್ವ ಮುಂಗಾರು ಮಳೆ ಮುಂದುವರೆದಿದೆ. ಕೇರಳಕ್ಕೆ ಈ ಮಾರುತಗಳು ಮೇ 28 ರಂದು ಪ್ರವೇಶಿಸುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿಗೆ ಜೂನ್ 6 ಅಥವಾ 7 ರಂದು ಅಪ್ಪಳಿಸಲಿವೆ. ಈಗ ಉಂಟಾಗಿರುವ ಪಶ್ಚಿಮ ಬಂಗಾಳ ಬಳಿಯ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸುವುದಿಲ್ಲ” ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜುವೇಲ್ ಮಾಣಿಕ್ಕಂ ಹೇಳಿದ್ದಾರೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಈಗಾಗಲೇ ಪುರ್ವ ಮುಂಗಾರು ಮಳೆ ಆರಂಭವಾಗಿದೆ. ಇನ್ನು ನಿಗದಿಯಂತೆ ಜೂನ್ 6 ಅಥವಾ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…