ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನದಲ್ಲಿಯೂ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದೆ. ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್ ಎಲರ್ಟ್ , ನಾಳೆ ಆರೆಂಜ್ ಎಲರ್ಟ್ ನೀಡಲಾಗಿದೆ. ಒಳನಾಡು ಪ್ರದೇಶದ ಕೆಲವು ಕಡೆ ಇಂದು ರೆಡ್ ಎಲರ್ಟ್ , ನಾಳೆ ಆರೆಂಜ್ ಎಲರ್ಟ್ ನೀಡಲಾಗಿದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…