ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ಜು.6 ರಂದು ಕೂಡಾ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಅರೆಂಜ್ ಅಲರ್ಟ್ ಮುಂದುವರಿದಿದೆ. ಬಿರುಗಾಳಿ ಸಹಿತ ಮಳೆಯಾಗಲಿದೆ. ಕಡಲು ಪ್ರಕ್ಷುಬ್ದಗೊಂಡು ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಅಪ್ಪಳಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜು. 6 ರವರೆಗೆ ಕರಾವಳಿ ಜಿಲ್ಲೆಗಳಾದ ಮಂಗಳೂರಿನಿಂದ ಕಾರವಾರದವರೆಗೆ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಆರ್ಭಟಿಸಲಿದ್ದು. ಈ ಹಿನ್ನೆಲೆಯಲ್ಲಿ ಕಡಲ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಮಳೆಯ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…