Advertisement
ಪ್ರಮುಖ

#HeavyRain | ಮುಂದುವರಿದ ಭಾರೀ ಮಳೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.6 ರೆಡ್‌ ಎಲರ್ಟ್‌ ಹಿನ್ನೆಲೆ | ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ಜು.6 ರಂದು ಕೂಡಾ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಎಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಅರೆಂಜ್ ಅಲರ್ಟ್ ಮುಂದುವರಿದಿದೆ. ಬಿರುಗಾಳಿ ಸಹಿತ ಮಳೆಯಾಗಲಿದೆ. ಕಡಲು ಪ್ರಕ್ಷುಬ್ದಗೊಂಡು ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಅಪ್ಪಳಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜು. 6 ರವರೆಗೆ ಕರಾವಳಿ ಜಿಲ್ಲೆಗಳಾದ ಮಂಗಳೂರಿನಿಂದ  ಕಾರವಾರದವರೆಗೆ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಆರ್ಭಟಿಸಲಿದ್ದು. ಈ ಹಿನ್ನೆಲೆಯಲ್ಲಿ ಕಡಲ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಮಳೆಯ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

19 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago