ಸುದ್ದಿಗಳು

#HeavyRain|ಕೊಡಗು ಜಿಲ್ಲೆಯಾದ್ಯಂತ ಅಬ್ಬರದ ಮಳೆ : KRSಗೆ ದಾಖಲೆ ಪ್ರಮಾಣದಲ್ಲಿ ಒಳ ಹರಿವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಜಿಲ್ಲೆಗಳು ಸೇರಿದಂತೆ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಂತೆ ಮಡಿಕೇರಿ#Madikeri ತಾಲೂಕಿನ ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಈ ಹಿನ್ನಲೆ ದೋಣಿಕಡವು-ಕೂಡಕಂಡಿ ಪರಂಬು ಸಂಪರ್ಕ‌ ಬೆಸೆಯುವ ಸೇತುವೆ ಜಲಾವೃತವಾಗಿದೆ. ಇತ್ತ ಒಣಗಿ ಹೋಗಿದ್ದ KRS Damಗೆ ಧಾರಾಕಾರ ನೀರು ಹರಿದು ಬರಲು ಆರಂಭವಾಗಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ದೋಣಿಕಡವು-ಕೂಡಕಂಡಿ ಪರಂಬು ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಿಲ್ಲ. ಇನ್ನು ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಸ್ಥಳೀಯರು ಪ್ರವಾಹ ದಾಟಿದ ಘಟನೆ ನಡೆದಿದೆ. ಕೆಪಿ ರಕ್ಷಿತ್ ಎಂಬಾತ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ, ಸೇತುವೆ ಮುಳುಗಡೆಯಾದ ಕಾರಣ ಹೋಗಲಾಗಿರಲಿಲ್ಲ. ಇದೀಗ ಸ್ಥಳೀಯರೇ ಸೇರಿ ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಹೋಗಿದ್ದಾರೆ.

Advertisement
2023ನೇ ಸಾಲಿನಲ್ಲಿ ಇದೇ ಅಧಿಕ ಪ್ರಮಾಣದ ಒಳಹರಿವು ಆಗಿದೆ. ಡ್ಯಾಂ ಬರಿದಾಗುವ ಸಮಯದಲ್ಲಿ ಈ ಪ್ರಮಾಣದ ಒಳಹರಿವು ಕಾವೇರಿ ನೀರು ಅವಲಂಬಿತ ಜನರಲ್ಲಿ ಮಂದಹಾಸ ತರಿಸಿದೆ. 124.80 ಅಡಿಗಳ ಡ್ಯಾಂ 82.00 ಅಡಿಯಲ್ಲಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 11.695 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳ ಹರಿವಿನ ಪ್ರಮಾಣ 13,499 ಕ್ಯೂಸೆಕ್ ಇದ್ದು, ಡ್ಯಾಂ ಹೊರಹರಿವು 353 ಕ್ಯೂಸೆಕ್ ಇದೆ.

ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್‌ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

7 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

14 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

22 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

23 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 days ago