ಚಂಡಮಾರುತ ಬಿಪರ್ ಜಾಯ್ ಮುಂದಿನ 24 ಗಂಟೆಗಳಲ್ಲಿ ಬಲಗೊಂಡು ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆ ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೇರಳವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರುಗಳಲ್ಲಿ ಎಲ್ಲೋ ಎಲರ್ಟ್ ಘೋಷಿಸಿದೆ.
ತೀವ್ರ ಚಂಡಮಾರುತ ಬಿಪರ್ ಜಾಯ್ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಿಂದ ಮುಂದೆ ಸಾಗಿದ್ದು ಮುಂದಿನ 24 ಗಂಟೆಗಳ ಅವಧಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದ ವಿವಿದೆಡೆ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.