ಬಿಪರ್ ಜಾಯ್ | ಬಲಗೊಳ್ಳುತ್ತಿರುವ ಚಂಡಮಾರುತ ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲನೆ | ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಉತ್ತಮ ಮಳೆ ನಿರೀಕ್ಷೆ |

June 10, 2023
9:53 AM

 ಚಂಡಮಾರುತ ಬಿಪರ್‌ ಜಾಯ್ ಮುಂದಿನ 24 ಗಂಟೆಗಳಲ್ಲಿ ಬಲಗೊಂಡು   ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ತಿಳಿಸಿದೆ. ಈ ನಡುವೆ ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕೇರಳವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರುಗಳಲ್ಲಿ ಎಲ್ಲೋ ಎಲರ್ಟ್ ಘೋಷಿಸಿದೆ.

ತೀವ್ರ ಚಂಡಮಾರುತ ಬಿಪರ್‌ ಜಾಯ್ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಿಂದ ಮುಂದೆ ಸಾಗಿದ್ದು  ಮುಂದಿನ 24 ಗಂಟೆಗಳ ಅವಧಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ  ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದ ವಿವಿದೆಡೆ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror