ಹವಾಮಾನ ವರದಿ | 18-08-2025 | ವಾಯುಭಾರ ಕುಸಿತದ ಮಳೆಯ ಅಬ್ಬರ | ಆ.19-20 ರಿಂದ ಮಳೆ ಕಡಿಮೆ |

August 18, 2025
12:52 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್ ತಲುಪಲಿದೆ. ಆಗಸ್ಟ್ 18ರಿಂದ 20ರ ತನಕ ಉತ್ತರ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಮುಂಬೈ ಸುತ್ತಮುತ್ತ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. 21ರಂದು ಗುಜರಾತ್ ನ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

19.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸಂಜೆ ಹಾಗೂ ರಾತ್ರಿ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 19 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ 21ರಿಂದ ಕಡಿಮೆಯಾಗಬಹುದು.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ ಮಳೆ ಕಡಿಮೆ ಇರಬಹುದು. ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಜಿಲ್ಲೆಗಳ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರಿಂದ ಮತ್ತು ಉತ್ತರ ಒಳನಾಡಿನಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್ ತಲುಪಲಿದೆ. ಆಗಸ್ಟ್ 18 ರಿಂದ 20ರ ತನಕ ಉತ್ತರ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. ಮುಂಬೈ ಸುತ್ತಮುತ್ತ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. 21 ರಂದು ಗುಜರಾತ್ ನ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ -ಹವಾಮಾನ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ
March 15, 2026
10:00 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ
March 15, 2026
1:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror