19.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ರಾಮನಗರ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿ ಒಡಿಸ್ಸಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೂ 2 ದಿನಗಳ ಕಾಲ ಉತ್ತಮ ಹಾಗೂ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ತಿರುಗುವಿಕೆಯು ಜುಲೈ 21ರಂದು ಒಡಿಸ್ಸಾಕ್ಕೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂದಿನ 2 ದಿವಸಗಳಲ್ಲಿ ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ. ಇದರಿಂದ ಮಹಾರಾಷ್ಟ್ರದಿಂದ ಹರಿದು ಬರುವ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 20ರಿಂದ ಭಾರಿ ಮಳೆ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 20ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.