Advertisement
ವೆದರ್ ಮಿರರ್

ಹವಾಮಾನ ವರದಿ | 18-07-2024 | ಕರಾವಳಿ ಜೆಲ್ಲೆಗಳಾದ್ಯಂತ ಭಾರಿ ಮಳೆ | ಜು.20 ರ ನಂತರವೇ ಮಳೆ ಕಡಿಮೆ..! |

Share

19.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ರಾಮನಗರ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿ ಒಡಿಸ್ಸಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೂ 2 ದಿನಗಳ ಕಾಲ ಉತ್ತಮ ಹಾಗೂ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ತಿರುಗುವಿಕೆಯು ಜುಲೈ 21ರಂದು ಒಡಿಸ್ಸಾಕ್ಕೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂದಿನ 2 ದಿವಸಗಳಲ್ಲಿ ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ. ಇದರಿಂದ ಮಹಾರಾಷ್ಟ್ರದಿಂದ ಹರಿದು ಬರುವ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು.

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 20ರಿಂದ ಭಾರಿ ಮಳೆ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 20ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

12 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

17 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago