ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸೋಮವಾರ ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಂಗಳವಾರವೂ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಕೊಡಗು, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟರಾಜ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದ್ದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲೂಕುಗಳ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಕಾರಣ, ಜಿಲ್ಲೆಯ ಎಂಟು ತಾಲೂಕುಗಳಾದ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ಸವದತ್ತಿ, ರಾಮದುರ್ಗ, ಚಿಕ್ಕೋಡಿ ಮತ್ತು ಹುಕ್ಕೇರಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದರ ಜೊತೆಗೆ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿಯ ಪದವಿ ಪೂರ್ವ ಕಾಲೇಜುಗಳಿಗೂ ರಜೆ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…