Advertisement
MIRROR FOCUS

ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ | ಇಂದು ಕೂಡಾ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ |

Share

ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಸೋಮವಾರ ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಂಗಳವಾರವೂ ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಕೊಡಗು, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟರಾಜ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ  ರೆಡ್ ಅಲರ್ಟ್ ನೀಡಿದ್ದು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ  ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲೂಕುಗಳ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆಯ  ಕಾರಣ, ಜಿಲ್ಲೆಯ ಎಂಟು ತಾಲೂಕುಗಳಾದ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ಸವದತ್ತಿ, ರಾಮದುರ್ಗ, ಚಿಕ್ಕೋಡಿ ಮತ್ತು ಹುಕ್ಕೇರಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದರ ಜೊತೆಗೆ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿಯ ಪದವಿ ಪೂರ್ವ ಕಾಲೇಜುಗಳಿಗೂ ರಜೆ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

10 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

17 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

17 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

22 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

22 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

1 day ago