ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮತ್ತೆ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಚಿಕ್ಕಮಗಳೂರು ,ಉತ್ತರಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಶನಿವಾರವೂ ಭಾರೀ ಮಳೆಯ ಸಾಧ್ಯತೆಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕಸಬಾ, ಅಂಬಳೆ, ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ ರಜೆ ನೀಡಲಾಗಿದೆ. ತರೀಕೆರೆ ತಾಲೂಕಿನ ಲಿಂಗದಹಳ್ಳಿ-ಲಕ್ಕವಳ್ಳಿ ಹೋಬಳಿ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರಜೆ ಘೋಷಣೆ ಮಡಲಾಗಿದೆ.
ಕೊಡಗು ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಮುಂದುವರೆದಿದ್ದು, ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ವಿವಿದೆಡೆ ಹಾನಿಯುಂಟಾಗಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯ ಕೆಲವು ತಾಲೂಕುಗಳ ಶಾಲೆ ಕಾಲೇಜುಗಳಿಗೆ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…