Advertisement
MIRROR FOCUS

ಮುಂದುವರಿದ ಭಾರೀ ಗಾಳಿ ಮಳೆ ಅಬ್ಬರ | ನಾಳೆ ಯಾವ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ..?

Share

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮತ್ತೆ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಚಿಕ್ಕಮಗಳೂರು ,ಉತ್ತರಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು. ಶನಿವಾರವೂ ಭಾರೀ ಮಳೆಯ ಸಾಧ್ಯತೆಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕಸಬಾ, ಅಂಬಳೆ, ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ ರಜೆ ನೀಡಲಾಗಿದೆ. ತರೀಕೆರೆ ತಾಲೂಕಿನ ಲಿಂಗದಹಳ್ಳಿ-ಲಕ್ಕವಳ್ಳಿ ಹೋಬಳಿ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರಜೆ ಘೋಷಣೆ ಮಡಲಾಗಿದೆ.

ಕೊಡಗು ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಮುಂದುವರೆದಿದ್ದು, ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ವಿವಿದೆಡೆ ಹಾನಿಯುಂಟಾಗಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯ ಕೆಲವು ತಾಲೂಕುಗಳ ಶಾಲೆ ಕಾಲೇಜುಗಳಿಗೆ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ಉಳಿದ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

14 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

19 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

19 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

20 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

20 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago