ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

October 23, 2024
6:09 AM
ಸತತವಾಗಿ ಮಳೆಯಾಗುತ್ತಿರುವುದರಿಂದ ಕಟಾವಿಗೆ ಸಿದ್ಧವಾಗಿರುವ ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಬೆಳೆಗೆ ಸಂಕಷ್ಟವಾಗಿದೆ. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಕಟಾವಿಗೆ ಸಿದ್ಧವಾಗಿದ್ದು ಮಳೆಯಿಂದ ಸಂಕಷ್ಟವಾಗಿದೆ. 

ಸತತವಾಗಿ ಸುರಿಯುತ್ತಿರುವ  ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಟಾವಿಗೆ ಬಂದ ಈರುಳ್ಳಿ ಕೊಳೆಯುತ್ತಿದ್ದರೆ, ಸತತ ಮಳೆಯಿಂದ ಹತ್ತಿ ಕೂಡ ಹಾನಿಯಾಗಿದೆ. ಕಟಾವು ಮಾಡಿದ ಜೋಳ ಹಸಿರು ಮೊಳಕೆ ಹೊಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿರುವ 1835 ಹೆಕ್ಟೇರ್ ಪ್ರದೇಶದಲ್ಲಿರುವ ಕೃಷಿ ಬೆಳೆ ಹಾಗೂ 40 ಹೆಕ್ಟೇರ್ ಪ್ರದೇಶದಲ್ಲಿರುವ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯ ಕಾರಣದಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದರು.  ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ ಕೃಷಿ ಹಾನಿಯಾಗಿದೆ.  ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯದಿಂದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.  ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕ ಮುಳುಗಡೆಯಾಗಿವೆ. ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ. ಹತ್ತಿ ಮೆಕ್ಕೆಜೋಳ ಮತ್ತು ತೊಗರಿ ಬೆಳೆದಿರುವ ರೈತರು ನಷ್ಟ ಅನುಭವಿಸುವಂತಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ ಕೃಷಿಗೆ ಹಾನಿಯಾಗಿದೆ.

ಹಿಂಗಾರು ಮಳೆಯಿಂದ ಜಿಲ್ಲೆಯಲ್ಲಿ ಹತ್ತಿ, ಈರುಳ್ಳಿ, ಮೆಕ್ಕೆ ಜೋಳ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ನೀಡಬೇಕು.ಒಂದೆಡೆ ಬೆಲೆ ಇಲ್ಲದೆ ಕಂಗಾಲಾಗಿರುವ ಪರಿಸ್ಥಿತಿಯಲ್ಲಿದ್ದ ರೈತರು ಮಳೆಯಿಂದ ಮತ್ತಷ್ಟು ಹಾನಿ ಅನುಭವಿಸಬೇಕಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು   ರೈತ ಬಸವನಗೌಡ ಮನವಿ ಮಾಡಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ
January 11, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror