ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಕಟಾವಿಗೆ ಸಿದ್ಧವಾಗಿದ್ದು ಮಳೆಯಿಂದ ಸಂಕಷ್ಟವಾಗಿದೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಟಾವಿಗೆ ಬಂದ ಈರುಳ್ಳಿ ಕೊಳೆಯುತ್ತಿದ್ದರೆ, ಸತತ ಮಳೆಯಿಂದ ಹತ್ತಿ ಕೂಡ ಹಾನಿಯಾಗಿದೆ. ಕಟಾವು ಮಾಡಿದ ಜೋಳ ಹಸಿರು ಮೊಳಕೆ ಹೊಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿರುವ 1835 ಹೆಕ್ಟೇರ್ ಪ್ರದೇಶದಲ್ಲಿರುವ ಕೃಷಿ ಬೆಳೆ ಹಾಗೂ 40 ಹೆಕ್ಟೇರ್ ಪ್ರದೇಶದಲ್ಲಿರುವ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯ ಕಾರಣದಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ ಕೃಷಿ ಹಾನಿಯಾಗಿದೆ. ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯದಿಂದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕ ಮುಳುಗಡೆಯಾಗಿವೆ. ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ. ಹತ್ತಿ ಮೆಕ್ಕೆಜೋಳ ಮತ್ತು ತೊಗರಿ ಬೆಳೆದಿರುವ ರೈತರು ನಷ್ಟ ಅನುಭವಿಸುವಂತಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ ಕೃಷಿಗೆ ಹಾನಿಯಾಗಿದೆ.
ಹಿಂಗಾರು ಮಳೆಯಿಂದ ಜಿಲ್ಲೆಯಲ್ಲಿ ಹತ್ತಿ, ಈರುಳ್ಳಿ, ಮೆಕ್ಕೆ ಜೋಳ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ನೀಡಬೇಕು.ಒಂದೆಡೆ ಬೆಲೆ ಇಲ್ಲದೆ ಕಂಗಾಲಾಗಿರುವ ಪರಿಸ್ಥಿತಿಯಲ್ಲಿದ್ದ ರೈತರು ಮಳೆಯಿಂದ ಮತ್ತಷ್ಟು ಹಾನಿ ಅನುಭವಿಸಬೇಕಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ರೈತ ಬಸವನಗೌಡ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…