ಕಳೆದ 15 ದಿನಗಳಿಂದ ಕ್ಷೀಣಗೊಂಡಿರುವ ಮಳೆರಾಯ ಮತ್ತೊಮ್ಮೆ ಅಬ್ಬರಿಸುವ ಸಾಧ್ಯತೆ ಇದೆ. ಮುಂದಿನ ವಾರದ ನಂತರ ಅಂದರೆ ಆಗಸ್ಟ್ 25ರಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಸೂಚನೆ ನೀಡಿದೆ.
ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭೂಕುಸಿತ ಉಂಟಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಭೂ ವಿಜ್ಞಾನಿಗಳ ತಂಡ ಅಧ್ಯಯನ ನಡೆಸಿ, 439 ಅಪಾಯಕಾರಿ ಸ್ಥಳಗಳನ್ನು ಗುರುತಿಸಿದೆ. 2018ರಿಂದ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದಲ್ಲಿ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜನರು ಮುಂಜಾಗ್ರತ ಕ್ರಮವಾಗಿ ಮಳೆ ಬೀಳುವ ಸಮಯದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುತ್ತಾರೆ. ಮುಂದಿನ ಭಾರೀ ಮಳೆಗಳ ಬಗ್ಗೆ ಎಚ್ಚರಿಕೆ ಅಗತ್ಯವಾಗಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…