ದೇಶದ ಹಲವು ರಾಜ್ಯಗಳಲ್ಲಿ ಸುರಿದ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯ ಪರಿಣಾಮ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಧಿಕಾರಿಗಳಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯಿಂದ ಉಂಟಾದ ಬೆಳೆ ನಷ್ಟವನ್ನು ಶೀಘ್ರ ಅಂದಾಜು ಮಾಡಿ ವರದಿ ಸಲ್ಲಿಸಲು ಹಾಗೂ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಂಬಂಧಿಸಿದ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸುವಂತೆ ಸೂಚಿಸಲಾಗಿದೆ.
ರೈತರಿಗೆ ಕೇಂದ್ರದ ಭರವಸೆ : ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ರೈತರ ಜೊತೆ ನಿಂತುಕೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಳೆ ನಷ್ಟದಿಂದ ಆತಂಕಕ್ಕೊಳಗಾಗಬೇಕಿಲ್ಲ, ಸರ್ಕಾರ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ರಾಜ್ಯಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಎದುರಾಗಿರುವ ಬೆಳೆ ನಷ್ಟವನ್ನು ಅಂದಾಜು ಮಾಡಲು ಪ್ರಗತಿ ಪರಿಶೀಲನೆ ನಡೆಸಬೇಕು. ಜೊತೆಗೆ ಪರಿಸ್ಥಿತಿಯನ್ನು ನಿಭಾಯಿಸಲು ಸಂಬಂಧಿಸಿದ ರಾಜ್ಯಗಳಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ
ಯಾವ ಪ್ರದೇಶಗಳಲ್ಲಿ ಹೆಚ್ಚು ಪರಿಣಾಮ? : ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಉತ್ತರ ಹಾಗೂ ಮಧ್ಯ ಭಾರತದ ಹಲವು ರಾಜ್ಯಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಭಾರೀ ಹೊಡೆತ ಬಿದ್ದಿದೆ. ವಿಶೇಷವಾಗಿ ಹಣ್ಣು, ತರಕಾರಿ ಮತ್ತು ಧಾನ್ಯ ಬೆಳೆಗಳಿಗೆ ಹಾನಿ ಹೆಚ್ಚಾಗಿದೆ.
Heavy rains and hailstorms across several Indian states have caused significant crop damage. Union Agriculture Minister Shivraj Singh Chouhan has directed officials to assess losses urgently and coordinate with states. He assured farmers that the central government will support them and take necessary relief measures.

