ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

April 6, 2026
6:59 AM
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ. ಕೇಂದ್ರ ಸರ್ಕಾರ ರೈತರ ನೆರವಿಗೆ ಮುಂದಾಗಿದ್ದು, ಹಾನಿ ಅಂದಾಜಿಗೆ ತುರ್ತು ಸೂಚನೆ ನೀಡಲಾಗಿದೆ.

ದೇಶದ ಹಲವು ರಾಜ್ಯಗಳಲ್ಲಿ ಸುರಿದ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯ ಪರಿಣಾಮ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅಧಿಕಾರಿಗಳಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯಿಂದ ಉಂಟಾದ ಬೆಳೆ ನಷ್ಟವನ್ನು ಶೀಘ್ರ ಅಂದಾಜು ಮಾಡಿ ವರದಿ ಸಲ್ಲಿಸಲು ಹಾಗೂ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಂಬಂಧಿಸಿದ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸುವಂತೆ ಸೂಚಿಸಲಾಗಿದೆ.

ರೈತರಿಗೆ ಕೇಂದ್ರದ ಭರವಸೆ : ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ರೈತರ ಜೊತೆ ನಿಂತುಕೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
ಬೆಳೆ ನಷ್ಟದಿಂದ ಆತಂಕಕ್ಕೊಳಗಾಗಬೇಕಿಲ್ಲ, ಸರ್ಕಾರ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಜ್ಯಗಳಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಎದುರಾಗಿರುವ ಬೆಳೆ ನಷ್ಟವನ್ನು ಅಂದಾಜು ಮಾಡಲು ಪ್ರಗತಿ ಪರಿಶೀಲನೆ ನಡೆಸಬೇಕು. ಜೊತೆಗೆ ಪರಿಸ್ಥಿತಿಯನ್ನು ನಿಭಾಯಿಸಲು ಸಂಬಂಧಿಸಿದ ರಾಜ್ಯಗಳಿಗೆ ಸಮನ್ವಯ ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ

ಯಾವ ಪ್ರದೇಶಗಳಲ್ಲಿ ಹೆಚ್ಚು ಪರಿಣಾಮ? : ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಉತ್ತರ ಹಾಗೂ ಮಧ್ಯ ಭಾರತದ ಹಲವು ರಾಜ್ಯಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಭಾರೀ ಹೊಡೆತ ಬಿದ್ದಿದೆ. ವಿಶೇಷವಾಗಿ ಹಣ್ಣು, ತರಕಾರಿ ಮತ್ತು ಧಾನ್ಯ ಬೆಳೆಗಳಿಗೆ ಹಾನಿ ಹೆಚ್ಚಾಗಿದೆ.

Heavy rains and hailstorms across several Indian states have caused significant crop damage. Union Agriculture Minister Shivraj Singh Chouhan has directed officials to assess losses urgently and coordinate with states. He assured farmers that the central government will support them and take necessary relief measures.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror