ದೆಹಲಿ ಸೇರಿದಂತೆ ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.ಭಾರತೀಯ ಹವಾಮಾನ ಇಲಾಖೆಯಿಂದ ಮುಂದಿನ 48 ಗಂಟೆಗಳಲ್ಲಿ ಬಾರಿ ಮಳೆಯಾಗುವ ಸೂಚನೆ ಇದೆ. ದೆಹಲಿ ಸೇರಿದಂತೆ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದಷ್ಟು ಕಡೆಗಳಲ್ಲಿ ಮಳೆಯಾಗುವ ಕುರಿತು ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ರಾಯಲ್ಪಾಡು, ಗೇರುಸೊಪ್ಪ, ಚಿಂಚೋಳಿ, ಔರಾದ್, ಚಿಂತಾಮಣಿ, ಮನ್ನಾಳಿ, ಸಿಂದಗಿ, ಸೈದಾಪುರ, ಬ್ರಹ್ಮಾವರ, ಬೀದರ್, ಹುಮನಾಬಾದ್, ಅಫಜಲ್ಪುರ, ರಾಯಚೂರು, ಮಧುಗಿರಿ, ಕುಡತಿನಿ, ಹರದನಹಳ್ಳಿಯಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ, ದೆಹಲಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಎಚ್ಎಎಲ್‌ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.8 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಗುಡುಗು, ಮೋಡ ಕವಿದ ವಾತಾವರಣ ಮತ್ತು ಮಳೆಯ ನಂತರ, ರಾಜಧಾನಿಯ ಜನರಿಗೆ ಬಿಸಿಲಿಗೆ ಪರಿಹಾರ ಸಿಕ್ಕಿದೆ, ಸೋಮವಾರ ಬೆಳಿಗ್ಗೆ ತಾಪಮಾನ ಸುಮಾರು 17 ಡಿಗ್ರಿ ಸೆಲ್ಸಿಯಸ್ ಆಗಿತ್ತು.
ದಿನದ ತಾಪಮಾನವು 26 ಡಿಗ್ರಿ ಸೆಲ್ಸಿಯಸ್ ಎಂದು ತಿಳಿಸಲಾಗಿದೆ. ಕಳೆದ ಎರಡು ದಿನಗಳಂತೆ ಇಂದು ಕೂಡ ದೆಹಲಿ ಎನ್‌ಸಿಆರ್ ಮೋಡ ಕವಿದ ವಾತಾವರಣವಿರುತ್ತದೆ. ಜೋರಾದ ಗಾಳಿ ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ.
ಗುರುಗ್ರಾಮ, ಗೌತಮ್ ಬುದ್ಧ ನಗರ ಮತ್ತು ಫರಿದಾಬಾದ್‌ಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಆಗ್ನೇಯ, ದಕ್ಷಿಣ ಮತ್ತು ಈಶಾನ್ಯ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಕೆಲವೆಡೆ ಲಘು ಮಳೆ ಮತ್ತು ಆಲಿಕಲ್ಲು ಮಳೆಯೂ ಆಗಬಹುದು