ಭಾರೀ ಮಳೆ | ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

August 17, 2025
10:31 PM

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮತ್ತು ಹಾಸನ ಜಿಲ್ಲೆಗಳಿಗೆ ಆ.18 ಹಾಗೂ 19 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ  ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ.18 ರಂದು ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸ,  ಭಾಗದಲ್ಲಿ ಹೆಚ್ಚಿನ  ಮಳೆಯಾಗಿದೆ. ಎನ್.ಆರ್. ಪುರ ತಾಲೂಕಿನ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್ 18 ರಂದು ಅಂಗನವಾಡಿ, ಶಾಲೆಗಳು, ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ರೆಡ್ ಅಲರ್ಟ್‌ನಿಂದಾಗಿ ಸ್ಥಳೀಯ ಆಡಳಿತವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನಲೆಯಲ್ಲಿಸೋಮವಾರ ಆ.18 ರಂದು ಜಿಲ್ಲೆಯ ಕಾರವಾರ,ಅಂಕೋಲ,ಕುಮಟಾ, ಹೊನ್ನಾವರ ಭಟ್ಕಳ,ಶಿರಸಿ,ಸಿದ್ದಾಪುರ,ಜೋಯಿಡಾ ಯಲ್ಲಾಪುರ,ದಾಂಡೇಲಿ ತಾಲೂಕುಗಳ ಶಾಲೆ,ಅಂಗನವಾಡಿ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ  ಆದೇಶ ಮಾಡಿದ್ದಾರೆ.ಜಿಲ್ಲೆಯ ಒಟ್ಟು 10 ತಾಲೂಕುಗಳ ಶಾಲೆ,ಅಂಗನವಾಡಿ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕೂಡಾ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲೆ,ಅಂಗನವಾಡಿ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಕೊಡಗು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಆ.18-19 ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಬೆಂಗಳೂರಿನಲ್ಲಿ ಆಗಸ್ಟ್ 17 ರಿಂದ 21 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಸೋಮವಾರದಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.  ಪಶ್ಚಿಮ ಘಟ್ಟ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ, ಸ್ಥಳೀಯರು ಮತ್ತು ಪ್ರಯಾಣಿಕರು ಎಚ್ಚರಿಕೆಯಿಂದ ಇರಬೇಕು. ಜಲಾಶಯಗಳು, ನದಿಗಳು, ಮತ್ತು ಕೆರೆ-ಕಾಲುವೆಗಳ ಬಳಿ ಹೋಗದಂತೆ ಸೂಚಿಸಲಾಗಿದೆ. ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹದ ಸಂಭವವೂ ಇರಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror