ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ. ಮಧ್ಯಾಹ್ನದಿಂದ ನಿರಂತರ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ, ಲಕ್ಷ್ಣಣತೀರ್ಥ ನದಿಗಳಲ್ಲಿಯೂ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ತಲಕಾವೇರಿ, ಭಾಗಮಂಡಲದಲ್ಲಿಯೂ ಭಾರೀ ಮಳೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಇಂದಿನಿಂದ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ.ಉತ್ತರಕನ್ನಡ ಜಿಲ್ಲೆಯಲ್ಲಿಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿರ್ದೇಶನ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿದ್ದು ಎಲ್ಲೋ ಎಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಜನ ಜೀವನ ಅಸ್ತ ವ್ಯಸ್ತಗೊಂಡಿದೆ. ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ, ಕಳಸ ಭಾಗಗಳಲ್ಲಿ ರಾತ್ರಿ ಮಳೆಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೂ ಎಲ್ಲೋ ಎಲರ್ಟ್ ಘೋಷಿಸಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…