ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy rain). ಅದರಲ್ಲೂ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಮ್ಮೆಲೇ ಆರಂಭವಾದ ಮುಂಗಾರು ಪೂರ್ವ ಮಳೆ ಜನರಿಗೆ ಸಂಕಷ್ಟವಾಗುವ ಹಾಗಿದೆ.
ತುಂತುರು ಮಳೆಗೆ ಶಾಲೆ ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ದ.ಕ ಜಿಲ್ಲೆ ಉಳ್ಳಾಲ ತಾಲೂಕಿ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಆಟವಾಡ್ತಿದ್ದಾಗ ಕಾಂಪೌಂಡ್ ಕುಸಿದು ಬಿದ್ದು ಅವಘಡ ನಡೆದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರಿನ (Mangaluru) ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ. ಮಂಗಳೂರಿನಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel