Advertisement
MIRROR FOCUS

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ | ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Share

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿಯಾಗುವ ಮಳೆ ಸಾಧ್ಯತೆ ಇದ್ದು, ಅಲ್ಲಲ್ಲಿ  ಭಾರಿ ಮಳೆ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಜುಲೈ 26 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು ನಂತರ ಮಳೆ  ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಕರಾವಳಿ ಭಾಗದಲ್ಲಿ ಜುಲೈ 27 ರವರೆಗೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.

ರಾಜ್ಯದ ಉತ್ತರಕನ್ನಡ , ಉಡುಪಿ  ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್‌ ಎಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌ ಎಲರ್ಟ್‌ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಜನರು ನದಿಗಳು, ನೀರಿರುವ ಪ್ರದೇಶ ಮತ್ತು ಸಮುದ್ರದಿಂದ ದೂರವಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಮತ್ತು ಕಾರ್ಮಿಕರು ಮಳೆ, ಗಾಳಿ ಅಥವಾ ಸಿಡಿಲು ಇರುವಾಗ ಹೊರಗೆ ಹೋಗಬಾರದು ಮತ್ತು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ ಅಥವಾ ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸಲಹೆ ನೀಡಲಾಗಿದೆ.  ಅಪಾಯಕಾರಿ ಮರಗಳು ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಮತ್ತು ಮುರಿದ ವಿದ್ಯುತ್ ತಂತಿಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ದುರ್ಬಲ ಅಥವಾ ಹಳೆಯ ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು. ಕಟ್ಟಡಗಳ ಮೇಲಿರುವ ಅಪಾಯಕಾರಿ ಕೊಂಬೆಗಳು ಇದ್ದಲ್ಲಿ ಅದನ್ನು ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಅಂತಹ ಪ್ರದೇಶಗಳ ನಿವಾಸಿಗಳು ಸ್ಥಳೀಯ ತಹಶೀಲ್ದಾರ್ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತಿರದ ಪರಿಹಾರ ಕೇಂದ್ರಗಳಲ್ಲಿ ಮುಂಚಿತವಾಗಿ ಆಶ್ರಯ ಪಡೆಯುವಂತೆ ಮಾಹಿತಿ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

21 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

22 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

22 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago