ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

June 17, 2025
10:02 PM

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ.  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.…… ಮುಂದೆ ಓದಿ……

ಈ ನಡುವೆ  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಮುಂದುವರಿದಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಮೂರು ಜನರು ಮೃತಪಟ್ಟಿದ್ದಾರೆ. ಮನೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸರಬರಾಜು ಹಾಗೂ ವಾಹನ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಅನೇಕ ಕಡೆ ಸಣ್ಣ ಮಟ್ಟದ ಭೂಕುಸಿತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಕನಿಷ್ಠ 5 ಭೂಕುಸಿತಗಳು ಸಂಭವಿಸಿರುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಅಣೆಕಟ್ಟುಗಳಲ್ಲಿ ನೀರಿನಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಆಗುತ್ತಿದ್ದು ಸಾಮಾನ್ಯ ಜನಜೀವನ ವ್ಯತ್ಯಯಗೊಂಡಿದೆ. ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಗಾಳಿಯಿಂದಾಗಿ ಅಲ್ಲಲ್ಲಿ ಮರಗಳು ವಿದ್ಯುತ್ ತಂತಿ ಮೇಲೆ ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.  ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಕಳಸ ತಾಲ್ಲೂಕಿನ ಮರಸಣಿಗೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರದ ರೆಂಬೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಕೊಪ್ಪ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಮಳೆಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಕೊಪ್ಪ, ಶೃಂಗೇರಿ ತಾಲೂಕಿನ ಹಲವೆಡೆ ಮರಗಳು ಬಿದ್ದು ವಿದ್ಯುತ್ ಕಂಬಳಿಗೆ ಹಾನಿ  ಉಂಟಾಗಿದೆ. ಜಿಲ್ಲೆಯ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಾವೇರಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮಳೆಯ ಜೊತೆ ಗಾಳಿ ಬೀಸುತ್ತಿದ್ದು, ಸುಮಾರು 75 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror