ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.…… ಮುಂದೆ ಓದಿ……
ಈ ನಡುವೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಮುಂದುವರಿದಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಮೂರು ಜನರು ಮೃತಪಟ್ಟಿದ್ದಾರೆ. ಮನೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸರಬರಾಜು ಹಾಗೂ ವಾಹನ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಅನೇಕ ಕಡೆ ಸಣ್ಣ ಮಟ್ಟದ ಭೂಕುಸಿತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಕನಿಷ್ಠ 5 ಭೂಕುಸಿತಗಳು ಸಂಭವಿಸಿರುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಅಣೆಕಟ್ಟುಗಳಲ್ಲಿ ನೀರಿನಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಆಗುತ್ತಿದ್ದು ಸಾಮಾನ್ಯ ಜನಜೀವನ ವ್ಯತ್ಯಯಗೊಂಡಿದೆ. ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಗಾಳಿಯಿಂದಾಗಿ ಅಲ್ಲಲ್ಲಿ ಮರಗಳು ವಿದ್ಯುತ್ ತಂತಿ ಮೇಲೆ ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಕಳಸ ತಾಲ್ಲೂಕಿನ ಮರಸಣಿಗೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರದ ರೆಂಬೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಕೊಪ್ಪ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಮಳೆಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಕೊಪ್ಪ, ಶೃಂಗೇರಿ ತಾಲೂಕಿನ ಹಲವೆಡೆ ಮರಗಳು ಬಿದ್ದು ವಿದ್ಯುತ್ ಕಂಬಳಿಗೆ ಹಾನಿ ಉಂಟಾಗಿದೆ. ಜಿಲ್ಲೆಯ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಾವೇರಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮಳೆಯ ಜೊತೆ ಗಾಳಿ ಬೀಸುತ್ತಿದ್ದು, ಸುಮಾರು 75 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…