ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ | ಮೀನುಗಾರರು ಸಮುದ್ರಕ್ಕೆ ಇಳಿಯದೆ ಮುನ್ನೆಚ್ಚರಿಕೆ

August 30, 2025
10:39 PM

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ.  ಕಡಲು ಕೂಡ ಪ್ರಕ್ಷುಬ್ಧಗೊಂಡಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ಮಂಗಳೂರು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077  ಅಥವಾ 0824-2442590 ಸಂಖ್ಯೆಯನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror