ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಕಡಲು ಕೂಡ ಪ್ರಕ್ಷುಬ್ಧಗೊಂಡಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ಲದೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ಮಂಗಳೂರು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಅಥವಾ 0824-2442590 ಸಂಖ್ಯೆಯನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…